ನೀವು ನಿಮ್ಮೊಡೆಯನ ಬಳಿ ಕ್ಷಮೆಯಾಚಿಸಿರಿ ಮತ್ತು ಅವನೆಡೆಗೆ ಒಲಿಯಿರಿ. ಅವನು ನಿಮಗೆ ಒಂದು ನಿರ್ದಿಷ್ಟ ಅವಧಿಯ ತನಕ ಶ್ರೇಷ್ಠ ಸಂಪತ್ಸಾಧನಗಳನ್ನು ದಯಪಾಲಿಸುವನು ಮತ್ತು ಪ್ರತಿಯೊಬ್ಬ ಅನುಗ್ರಹಶಾಲಿಗೆ ತನ್ನ ಅನುಗ್ರಹವನ್ನು ಕರುಣಿಸುವನು. ನೀವು (ಅವನನ್ನು ) ಕಡೆಗಣಿಸಿದರೆ, ಒಂದು ಮಹಾ ದಿನದ ಶಿಕ್ಷೆಯು ನಿಮ್ಮ ಮೇಲೆ ಎರಗುವ ಭಯ ನನಗಿದೆ