ನಿಮ್ಮ ಹಿಂದಿನ ಜನಾಂಗಗಳಲ್ಲಿ , ಭೂಮಿಯಲ್ಲಿ ಅಶಾಂತಿಯನ್ನು ಮೆರೆಯದಂತೆ ಜನರನ್ನು ತಡೆಯುವ ಸಜ್ಜನರು (ದೊಡ್ಡ ಸಂಖ್ಯೆಯಲ್ಲಿ) ಇರಬೇಕಿತ್ತು. ಆದರೆ ಅಂತಹ ಕೇವಲ ಕೆಲವರು ಮಾತ್ರ ಇದ್ದರು . ನಾವು ಅವರನ್ನು ಅವರಿಂದ (ದುಷ್ಟರಿಂದ) ರಕ್ಷಿಸಿದೆವು. ಅಕ್ರಮಿಗಳು ತಮಗೆ ನೀಡಲಾಗಿದ್ದ ಸುಖ ಭೋಗಗಳ ಹಿಂದೆಯೇ ಬಿದ್ದಿದ್ದರು. ಅವರು ಅಪರಾಧಿಗಳಾಗಿದ್ದರು