Back to Languages

Kannada - Chapter 11 - Hud

Translation by Abdussalam Puthige — Permalink

Verse 15 — Surah Hud 11:15

ತಮ್ಮ ಒಡೆಯನ ಕಡೆಯಿಂದ (ಬಂದ) ಸ್ಪಷ್ಟ ಸನ್ಮಾರ್ಗದಲ್ಲಿದ್ದು, ಅದನ್ನು (ದಿವ್ಯ ಸಂದೇಶವನ್ನು) ಸದಾ ಓದುತ್ತಾ, ಅದರ ಪರವಾಗಿಯೂ ಈ ಹಿಂದೆ ಮೂಸಾರ ಬಳಿಗೆ ಮಾರ್ಗದರ್ಶಿ ಹಾಗೂ ಅನುಗ್ರಹವಾಗಿ ಬಂದಿದ್ದ ಗ್ರಂಥದ ಪರವಾಗಿಯೂ ಸಾಕ್ಷಿಯಾದವರೇ ನಿಜವಾಗಿ ಅದನ್ನು ನಂಬುವವರು. ಇನ್ನು, ವಿವಿಧ ಪಂಗಡಗಳ ಪೈಕಿ ಇದನ್ನು ಧಿಕ್ಕರಿಸಿದವರ ಪಾಲಿಗೆ (ನರಕದ) ಬೆಂಕಿಯೇ ಅಂತಿಮ ನೆಲೆಯಾಗಿರುವುದು. ನೀವು ಈ ಕುರಿತು ಕಿಂಚಿತ್ತೂ ಸಂಶಯ ತಾಳಬೇಡಿ. ಖಂಡಿತವಾಗಿಯೂ ಇದು ನಿಮ್ಮ ಒಡೆಯನ ಕಡೆಯಿಂದಲೇ ಬಂದಿರುವ ಸತ್ಯವಾಗಿದೆ. ಆದರೆ ಮಾನವರಲ್ಲಿ ಹೆಚ್ಚಿನವರು ಇದನ್ನು ನಂಬುವುದಿಲ್ಲ