ನನ್ನೊಡನೆ ಅಲ್ಲಾಹನ ಭಂಡಾರಗಳಿವೆ ಎಂದೇನೂ ನಾನು ನಿಮ್ಮೊಡನೆ ಹೇಳಿಲ್ಲ. ಅದೃಶ್ಯದ ಜ್ಞಾನವೂ ನನಗಿಲ್ಲ. ನಾನು ‘ಮಲಕ್’ ಎಂದು ನಾನು ನಿಮ್ಮೊಡನೆ ಹೇಳಿಕೊಂಡಿಲ್ಲ. ಹಾಗೆಯೇ, ನಿಮ್ಮ ಕಣ್ಣುಗಳಿಗೆ ಹೀನರಾಗಿ ಕಾಣಿಸುವವರಿಗೆ ಅಲ್ಲಾಹನು ಯಾವುದೇಹಿತವನ್ನು ನೀಡುವುದಿಲ್ಲ ಎಂದೂ ನಾನು ಹೇಳಿಲ್ಲ, ಅವರ ಮನಸ್ಸಿನಲ್ಲೇನಿದೆ ಎಂಬುದನ್ನು ಅಲ್ಲಾಹನೇ ಚೆನ್ನಾಗಿ ಬಲ್ಲನು. ಹೀಗಿರುತ್ತಾ (ನಾನು ಅವರನ್ನು ದೂರಗೊಳಿಸಿದರೆ) ಖಂಡಿತವಾಗಿಯೂ ನಾನು ಅಕ್ರಮಿಯಾಗುವೆನು