ನಮ್ಮ ದೇವರುಗಳ ಪೈಕಿ ಯಾರೋ ಒಬ್ಬರು ನಿಮ್ಮ ಮೇಲೆ ಮಾಡಿರುವ ಬಹಳ ಕೆಟ್ಟ ಸ್ವರೂಪದ ಮಾಟಕ್ಕೆ ನೀವು ತುತ್ತಾಗಿದ್ದೀರಿ ಎಂದೇ ನಾವು ಹೇಳುತ್ತೇವೆ. ಅವರು (ಹೂದ್) ಹೇಳಿದರು; ಖಂಡಿತವಾಗಿಯೂ ನಾನು ಅಲ್ಲಾಹನನ್ನು ಸಾಕ್ಷಿಯಾಗಿಸುತ್ತೇನೆ ಮತ್ತು ನೀವೂ ಸಾಕ್ಷಿಗಳಾಗಿರಿ – ನೀವು (ಅಲ್ಲಾಹನ ಜೊತೆ) ಯಾರನ್ನೆಲ್ಲಾ ಪಾಲುದಾರರಾಗಿಸುತ್ತಿರುವಿರೋ ಅವರೆಲ್ಲರಿಂದ ನಾನು ಮುಕ್ತನಾಗಿದ್ದೇನೆ