Back to Languages

Kannada - Chapter 11 - Hud

Translation by Abdussalam Puthige — Permalink

Verse 55 — Surah Hud 11:55

ನೀವೀಗ (ಸತ್ಯವನ್ನು) ಕಡೆಗಣಿಸುವಿರಾದರೆ (ನಿಮಗೆ ತಿಳಿದಿರಲಿ;) ಯಾವ ಸತ್ಯದೊಂದಿಗೆ ನನ್ನನ್ನು ನಿಮ್ಮ ಕಡೆಗೆ ಕಳಿಸಲಾಗಿತ್ತೋ ಅದನ್ನು ನಾನು ನಿಮಗೆ ತಲುಪಿಸಿ ಬಿಟ್ಟಿದ್ದೇನೆ. (ಈಗ) ನನ್ನ ಒಡೆಯನು ನಿಮ್ಮ ಸ್ಥಾನದಲ್ಲಿ ಬೇರೊಂದು ಜನಾಂಗವನ್ನು (ನಾಡಿನ) ಉತ್ತರಾಧಿಕಾರಿಯಾಗಿ ಮಾಡುವನು. ಅವನಿಗೆ (ಅಲ್ಲಾಹನಿಗೆ) ಯಾವ ಹಾನಿಯನ್ನೂ ಮಾಡಲು ನಿಮಗೆ ಸಾಧ್ಯವಾಗದು. ಖಂಡಿತವಾಗಿಯೂ ನನ್ನ ಒಡೆಯನು ಎಲ್ಲವುಗಳ ಸಂರಕ್ಷಕನಾಗಿದ್ದಾನೆ