ಅವರು (ಸಾಲಿಹ್) ಹೇಳಿದರು; ನನ್ನ ಜನಾಂಗದವರೇ, ನೀವು (ಚಿಂತಿಸಿ) ನೋಡಿದಿರಾ, ಒಂದು ವೇಳೆ ನಾನು ನನ್ನ ಒಡೆಯನ ಕಡೆಯಿಂದ (ತೋರಲಾದ) ಸ್ಪಷ್ಟವಾದ ಸರಿ ದಾರಿಯಲ್ಲಿದ್ದು, ಅವನು ತನ್ನ ಕಡೆಯಿಂದ ನನಗೆ ವಿಶೇಷ ಅನುಗ್ರಹವನ್ನು ದಯಪಾಲಿಸಿರುವಾಗ, ನಾನು ಅವನ ಆಜ್ಞೆಯನ್ನು ಮೀರಿನಡೆದರೆ, ಅಲ್ಲಾಹನಿಂದ ಯಾರು ತಾನೇ ನನ್ನನ್ನು ರಕ್ಷಿಸಬಲ್ಲರು? ನೀವಂತು ನನ್ನ ಪಾಲಿಗೆ ಕೇವಲ ನಷ್ಟವನ್ನು ಮಾತ್ರ ಹೆಚ್ಚಿಸುತ್ತಿರುವಿರಿ