ಮುಂದೆ ಮದ್‌ಯನ್‌ನ ಕಡೆಗೆ ಅವರ ಸಹೋದರ ಶುಐಬ್‌ರನ್ನು ಕಳಿಸಲಾಯಿತು. ಅವರು ಹೇಳಿದರು; ನನ್ನ ಜನಾಂಗದವರೇ, ನೀವು ಅಲ್ಲಾಹನನ್ನೇ ಪೂಜಿಸಿರಿ. ನಿಮಗೆ ಅವನ ಹೊರತು ಬೇರೆ ದೇವರಿಲ್ಲ. ನೀವು ಅಳತೆ, ತೂಕದಲ್ಲಿ ಕಡಿತ ಮಾಡಬೇಡಿ. ಸದ್ಯ ನೀವು ಸುಖದಲ್ಲಿರುವುದನ್ನು ನಾನು ಖಂಡಿತ ಕಾಣುತ್ತಿದ್ದೇನೆ. ಆದರೆ ಸಂಪೂರ್ಣವಾಗಿ ಆವರಿಸಿ ಬಿಡುವ ದಿನವೊಂದರ ಶಿಕ್ಷೆಯು ನಿಮ್ಮ ಮೇಲೆ ಬಂದೆರಗುವ ಭಯ ನನಗಿದೆ