ಅವರು ಹೇಳಿದರು; ನನ್ನ ಜನಾಂಗದವರೇ, ನೀವು ನೋಡುತ್ತಿರುವಿರಾ? ನಾನಂತು ನನ್ನ ಒಡೆಯನ ಕಡೆಯಿಂದ (ಬಂದಿರುವ) ಸ್ಪಷ್ಟ ಪುರಾವೆಯನ್ನು ಅನುಸರಿಸುತ್ತಿದ್ದೇನೆ. ಅವನು ತನ್ನ ಕಡೆಯಿಂದ ನನಗೆ ಉತ್ತಮ ಆಹಾರವನ್ನು ನೀಡಿದ್ದಾನೆ. ನಾನು ಯಾವುದರಿಂದ ನಿಮ್ಮನ್ನು ತಡೆಯುತ್ತಿರುವೆನೋ ಅದನ್ನು ಸ್ವತಃ ಉಲ್ಲಂಘಿಸುವ ಇರಾದೆ ನನಗಿಲ್ಲ. ನಾನಂತು, ನನಗೆ ಸಾಧ್ಯವಿರುವಷ್ಟು ಮಟ್ಟಿಗೆ ಸುಧಾರಣೆಯನ್ನಷ್ಟೇ ಬಯಸುತ್ತೇನೆ. ಇನ್ನು, ನನಗೆ ನನ್ನ ಭಾಗ್ಯವನ್ನು ನೀಡುವವನು ಅಲ್ಲಾಹನ ಹೊರತು ಬೇರೆ ಯಾರೂ ಇಲ್ಲ. ನಾನು ಅವನಲ್ಲೇ ಭರವಸೆ ಇಟ್ಟಿದ್ದೇನೆ ಮತ್ತು ನಾನು ಅವನ ಕಡೆಗೇ ಮರಳುತ್ತೇನೆ