ನಾನು ನನ್ನ ಪೂರ್ವಜರಾದ ಇಬ್ರಾಹೀಮ್, ಇಸ್‌ಹಾಕ್ ಮತ್ತು ಯಅಕೂಬ್‌ರ ಧರ್ಮವನ್ನು ಅನುಸರಿಸಿದ್ದೇನೆ. ನಾವು ಯಾವುದನ್ನೂ ಅಲ್ಲಾಹನ ಜೊತೆ ಪಾಲುಗೊಳಿಸುವುದು ಸರಿಯಲ್ಲ. ಇದು (ಈ ಅರಿವು) ನಮ್ಮ ಮೇಲೆ ಹಾಗೂ ಎಲ್ಲ ಮಾನವರ ಮೇಲೆ ಅಲ್ಲಾಹನ ಅನುಗ್ರಹವಾಗಿದೆ. ಆದರೆ ಮಾನವರಲ್ಲಿ ಹೆಚ್ಚಿನವರು ಕೃತಜ್ಞತೆ ಸಲ್ಲಿಸುವುದಿಲ್ಲ