ಅವರು ತಮ್ಮ ತಂದೆ ತಾಯಿಯನ್ನು ರಾಜಪೀಠದಲ್ಲಿ ಎತ್ತರದಲ್ಲಿ ಕೂರಿಸಿದರು ಮತ್ತು ಅವರು, (ಸಹೋದರರು) ಅವರ (ಯೂಸುಫ್‌ರ) ಮುಂದೆ ಸಾಷ್ಟ್ಟಾಂಗವೆರಗಿದರು, ಅವರು (ಯೂಸುಫ್) ಹೇಳಿದರು; ನನ್ನ ತಂದೆಯೇ, ಇದುವೇ ಈ ಹಿಂದಿನ ನನ್ನ ಕನಸಿನ ತಾತ್ಪರ್ಯ. ನನ್ನ ಒಡೆಯನು ಅದನ್ನು ಸತ್ಯವಾಗಿಸಿರುವನು. ಅವನು ನನ್ನನ್ನು ಸೆರೆಮನೆಯಿಂದ ಹೊರತೆಗೆದಾಗ ಮತ್ತು ಶೈತಾನನು ನನ್ನ ಹಾಗೂ ನನ್ನ ಸಹೋದರರ ನಡುವೆ ಜಗಳ ಬೆಳೆಸಿದ ಬಳಿಕ ನಿಮ್ಮನ್ನು ಗ್ರಾಮದಿಂದ (ಇಲ್ಲಿಗೆ) ತಂದಾಗ (ಆ ಮೂಲಕ) ಅವನು ನನ್ನ ಮೇಲೆ ಔದಾರ್ಯ ತೋರಿದ್ದನು. ನನ್ನ ಒಡೆಯನು ಖಂಡಿತ ತಾನಿಚ್ಛಿಸಿದವರ ಪಾಲಿಗೆ ಸೌಮ್ಯನಾಗಿರುತ್ತಾನೆ. ಅವನು ಖಂಡಿತ ಎಲ್ಲವನ್ನೂ ಬಲ್ಲವನೂ ಯುಕ್ತಿವಂತನೂ ಆಗಿದ್ದಾನೆ