‘‘ಅಲ್ಲಾಹನನ್ನು ಮಾತ್ರ ಆರಾಧಿಸಿರಿ ಹಾಗೂ ಎಲ್ಲ ಮಿಥ್ಯ ದೇವರುಗಳಿಂದ ದೂರ ಉಳಿಯಿರಿ’’ ಎಂದು ಸಾರುವ ದೂತರನ್ನು ನಾವು ಎಲ್ಲ ಸಮುದಾಯಗಳಲ್ಲೂ ಕಳುಹಿಸಿದ್ದೇವೆ. ಅವರಲ್ಲಿ ಕೆಲವರಿಗೆ (ಕೆಲವು ಸಮುದಾಯಗಳಿಗೆ) ಅಲ್ಲಾಹನು ಸನ್ಮಾರ್ಗ ತೋರಿದರೆ ಮತ್ತೆ ಕೆಲವರ ಪಾಲಿಗೆ ದಾರಿಗೇಡಿತನವೇ ಗತಿಯಾಗಿ ಬಿಟ್ಟಿತು. ನೀವು ಭೂಮಿಯಲ್ಲಿ ನಡೆದಾಡಿ, (ಸತ್ಯವನ್ನು) ತಿರಸ್ಕರಿಸುವವರ ಅಂತ್ಯ ಏನಾಯಿತೆಂದು ನೋಡಿರಿ