ನೀವು (ಅವನನ್ನು) ಅಲ್ಲಾಹನೆಂದು ಕರೆಯಿರಿ ಅಥವಾ ರಹ್ಮಾನನೆಂದು ಕರೆಯಿರಿ. ನೀವು ಅವನನ್ನು ಏನೆಂದು ಕರೆದರೂ ಅತ್ಯುತ್ತಮ ಹೆಸರುಗಳೆಲ್ಲಾ ಅವನಿಗಾಗಿಯೇ ಇವೆ. ನೀವು ನಿಮ್ಮ ನಮಾಝ್‌ಗಳಲ್ಲಿ ಹೆಚ್ಚು ಧ್ವನಿಯೇರಿಸಬೇಡಿ ಮತ್ತು ಅವುಗಳನ್ನು ತೀರಾ ನಿಶ್ಯಬ್ದಗೊಳಿಸಲೂ ಬೇಡಿ. ಅವೆರಡರ ನಡುವಿನ (ಮಧ್ಯಮ) ಮಾರ್ಗವನ್ನು ಅನುಸರಿಸಿರಿ