ನಿಮ್ಮ ಒಡೆಯನು ಜನರನ್ನೆಲ್ಲಾ ಸುತ್ತುವರಿದಿರುವನು ಎಂದು ನಾವು ನಿಮಗೆ ಹೇಳಿದ ಸಂದರ್ಭ(ವನ್ನು ಸ್ಮರಿಸಿರಿ). ನಾವು ನಿಮಗೆ ತೋರಿಸಿದ ಆ ದೃಶ್ಯಗಳನ್ನು ಮತ್ತು ಕುರ್‌ಆನ್‌ನಲ್ಲಿ ಶಪಿಸಲಾಗಿರುವ ಆ ಮರವನ್ನು ನಾವು ಜನರ ಪಾಲಿಗೆ ಪರೀಕ್ಷೆಯಾಗಿಸಿದ್ದೇವೆ. ನಾವು ಅವರನ್ನು ಎಚ್ಚರಿಸುತ್ತಿದ್ದೇವೆ. ಆದರೆ ಅದು ಅವರ ಭಾರೀ ವಿದ್ರೋಹವನ್ನಷ್ಟೇ ಹೆಚ್ಚಿಸುತ್ತಿದೆ