‘‘ಇದೀಗ ನೀವು ಅವರನ್ನು ಮತ್ತು ಅವರು ಅಲ್ಲಾಹನನ್ನು ಬಿಟ್ಟು ಪೂಜಿಸುತ್ತಿದ್ದ ಎಲ್ಲವನ್ನೂ ತ್ಯಜಿಸಿ ಬಂದಿರುವುದರಿಂದ ಗುಹೆಯಲ್ಲಿ ಆಶ್ರಯ ಪಡೆಯಿರಿ. ನಿಮ್ಮ ಒಡೆಯನು ನಿಮಗಾಗಿ ತನ್ನ ಅನುಗ್ರಹವನ್ನು ವಿಸ್ತರಿಸುವನು ಮತ್ತು ನಿಮ್ಮ ಸನ್ನಿವೇಶದಲ್ಲಿ ನಿಮಗೆ ನೆರವನ್ನು ಒದಗಿಸುವನು’’ (ಎಂಬ ಶುಭವಾರ್ತೆಯನ್ನು ಅವರಿಗೆ ನೀಡಲಾಯಿತು)