ಮತ್ತು (ಕರ್ಮಗಳ) ದಾಖಲೆ ಗ್ರಂಥವನ್ನು ಮುಂದೆ ತರಲಾದಾಗ, ಅಪರಾಧಿಗಳು ಅದರೊಳಗೆ ಏನಿದೆಯೆಂದು ಆತಂಕದಲ್ಲಿರುವುದನ್ನು ನೀವು ಕಾಣುವಿರಿ. ‘‘ಅಯ್ಯೋ,ಐ ನಮ್ಮ ದೌರ್ಭಾಗ್ಯ! ಇದೆಂತಹ ಗ್ರಂಥ! ಸಣ್ಣದಿರಲಿ ದೊಡ್ಡದಿರಲಿ ಯಾವ ವಿಷಯವನ್ನೂ ಇದು ದಾಖಲಿಸದೆ ಬಿಟ್ಟಿಲ್ಲ’’ ಎಂದು ಅವರು ಹೇಳುವರು. ತಾವು ಮಾಡಿದ್ದೆಲ್ಲವನ್ನೂ ಅವರು ತಮ್ಮ ಮುಂದೆಯೇ ಕಾಣುವರು. ನಿಮ್ಮ ಒಡೆಯನು ಯಾರ ಮೇಲೂ ಅಕ್ರಮವೆಸಗಲಾರನು