ಅವರಿಬ್ಬರೂ ಮತ್ತೆ ಹೊರಟರು. ಅವರು ಒಂದು ಗ್ರಾಮದವರ ಬಳಿಗೆ ತಲುಪಿ, ಅವರೊಡನೆ ಆಹಾರವನ್ನು ಕೇಳಿದರು. ಆದರೆ ಅವರು ಇವರಿಗೆ ಆತಿಥ್ಯ ನೀಡಲು ನಿರಾಕರಿಸಿದರು. ಮುಂದೆ ಅವರು ಅಲ್ಲಿ ಒಂದು ಗೋಡೆಯನ್ನು ಕಂಡರು. ಅದು ಬೀಳುವುದರಲ್ಲಿತ್ತು. ಆ ವ್ಯಕ್ತಿ ಅದನ್ನು ಸ್ಥಿರಗೊಳಿಸಿದರು. ಆಗ ಅವರು (ಮೂಸಾ), ‘‘ನೀವು ಬಯಸಿದ್ದರೆ ಈ ಕೆಲಸಕ್ಕಾಗಿ ವೇತನ ಪಡೆಯ ಬಹುದಿತ್ತು’’ ಎಂದರು