ಜನರಲ್ಲೊಬ್ಬನು ಅಂಚಿನಲ್ಲಿ ನಿಂತು ಅಲ್ಲಾಹನನ್ನು ಆರಾಧಿಸುತ್ತಾನೆ. ಅದರಿಂದ ಅವನಿಗೇನಾದರೂ ಹಿತವಾದರೆ ಅಷ್ಟಕ್ಕೇ ತೃಪ್ತನಾಗಿ ಬಿಡುತ್ತಾನೆ. ಆದರೆ ಅವನಿಗೇನಾದರೂ ಪರೀಕ್ಷೆ ಎದುರಾದರೆ ಅವನು (ಅಲ್ಲಾಹನಿಂದ) ಮುಖ ತಿರುಗಿಸಿ ನಿಲ್ಲುತ್ತಾನೆ. ಅವನು ಇಹಲೋಕವನ್ನೂ ಕಳೆದುಕೊಂಡನು, ಪರಲೋಕವನ್ನೂ ಕಳೆದುಕೊಂಡನು. ಅತ್ಯಂತ ಸ್ಪಷ್ಟ ನಷ್ಟವಿದು