Back to Languages

Kannada - Chapter 27 - An-Naml

Translation by Abdussalam Puthige — Permalink

Verse 42 — Surah An-Naml 27:42

ಅರಮನೆಯನ್ನು ಪ್ರವೇಶಿಸು ಎಂದು ಆಕೆಯೊಡನೆ ಹೇಳಲಾಯಿತು. ಆಕೆ ಅದನ್ನು (ಅಲ್ಲಿಯ ನೆಲವನ್ನು) ಕಂಡಾಗ, ಅದು ಆಳವಾದ ನೀರೆಂದು ಭಾವಿಸಿ ತನ್ನ ವಸ್ತ್ರವನ್ನು ತನ್ನ ಪಾದಮಟ್ಟದಿಂದ ಮೇಲಕ್ಕೆ ಎಳೆದುಕೊಂಡಳು. ಅವರು (ಸುಲೈಮಾನ್) ಹೇಳಿದರು; ಇದು ಗಾಜುಗಳನ್ನು ಜೋಡಿಸಿ ಕಟ್ಟಿದ ಅರಮನೆ. ಆಕೆ ಹೇಳಿದಳು; ನನ್ನೊಡೆಯಾ, ನಾನು ನನ್ನ ಮೇಲೆಯೇ ಅಕ್ರಮವೆಸಗಿದ್ದೇನೆ ಮತ್ತು ಸುಲೈಮಾನರ ಜೊತೆ ನಾನು ಎಲ್ಲ ಲೋಕಗಳ ಒಡೆಯನಾದ ಅಲ್ಲಾಹನಿಗೆ ಶರಣಾಗುತ್ತೇನೆ