ಭೂಮಿಯನ್ನು ವಾಸಕ್ಕೆ ಯೋಗ್ಯಗೊಳಿಸಿದವನು, ಅದರ ನಡುವೆ ನದಿ ನಾಲೆಗಳನ್ನು ಹರಿಸಿದವನು ಹಾಗೂ ಅದಕ್ಕಾಗಿ (ಭೂಮಿಗಾಗಿ) ಪರ್ವತಗಳನ್ನು ನಿರ್ಮಿಸಿದವನು ಮತ್ತು ಎರಡು ಸಮುದ್ರಗಳ ನಡುವೆ ತೆರೆಯನ್ನು ಕಟ್ಟಿರುವವನು ಯಾರು? (ಇದನ್ನೆಲ್ಲಾ ಮಾಡಲು) ಅಲ್ಲಾಹನ ಜೊತೆಗೇನು ಬೇರೆ ದೇವರಿದ್ದಾರೆಯೇ? ಆದರೆ ಅವರಲ್ಲಿ ಹೆಚ್ಚಿನವರು ಬಲ್ಲವರಲ್ಲ