ಅವರು (ಇಬ್ರಾಹೀಮರು) ಹೇಳಿದರು; ನೀವು ಅಲ್ಲಾಹನನ್ನು ಬಿಟ್ಟು ವಿಗ್ರಹಗಳನ್ನು ನೆಚ್ಚಿಕೊಂಡಿರುವಿರಿ. ಇಹಲೋಕದ ಬದುಕಿನಲ್ಲಿ ನಿಮ್ಮ ನಡುವೆ ಭಾರೀ ಪ್ರೇಮವಿದೆ. ಆದರೆ ಪುನರುತ್ಥಾನ ದಿನ ನೀವು ಪರಸ್ಪರರನ್ನು ಧಿಕ್ಕರಿಸುವಿರಿ ಮತ್ತು ಪರಸ್ಪರ ಶಪಿಸಿಕೊಳ್ಳುವಿರಿ. ನರಕವೇ ನಿಮ್ಮ ಅಂತಿಮ ನೆಲೆಯಾಗಿರುವುದು ಮತ್ತು ನಿಮಗೆ ಯಾವ ಸಹಾಯಕರೂ ದೊರೆಯಲಾರರು