ಅವರಲ್ಲಿ ಪ್ರತಿಯೊಬ್ಬರನ್ನೂ ನಾವು ಅವರ ಪಾಪಗಳಿಗಾಗಿ ದಂಡಿಸಿದೆವು. ಅವರಲ್ಲಿ ಕೆಲವರ ಮೇಲೆ ನಾವು ಕಲ್ಲಿನ ಮಳೆಯನ್ನು ಸುರಿಸಿದರೆ, ಕೆಲವರು ಭೀಕರ ಬಿರುಗಾಳಿಗೆ ತುತ್ತಾದರು. ಮತ್ತೆ ಕೆಲವರನ್ನು ನಾವು ಭೂಮಿಯೊಳಗೆ ಅದುಮಿಬಿಟ್ಟರೆ, ಇನ್ನು ಕೆಲವರನ್ನು ನಾವು ಮುಳುಗಿಸಿಬಿಟ್ಟೆವು. ಅಲ್ಲಾಹನು ಅವರ ಮೇಲೆ ಅಕ್ರಮ ಎಸಗುವವನಾಗಿರಲಿಲ್ಲ. ಅವರು ತಮ್ಮ ಮೇಲೆ ತಾವೇ ಅಕ್ರಮವೆಸಗಿಕೊಂಡರು