ಮತ್ತು ನಾವು ಮನುಷ್ಯನಿಗೆ, ತನ್ನ ತಾಯಿ ತಂದೆಯ ಜೊತೆ ಅತ್ಯುತ್ತಮವಾಗಿ ವರ್ತಿಸಬೇಕೆಂದು ಆದೇಶಿಸಿರುವೆವು ಹಾಗೂ (ದೇವರೆಂದು) ನಿನಗೆ ತಿಳಿದಿಲ್ಲದವರನ್ನು ನನ್ನ ಜೊತೆ ಪಾಲುಗೊಳಿಸಲು ಅವರು ನಿನ್ನನ್ನು ಆಗ್ರಹಿಸಿದರೆ, ಅವರನ್ನು ಅನುಸರಿಸಬೇಡ. ಕೊನೆಗೆ ನೀವು ನನ್ನ ಬಳಿಗೇ ಮರಳಿ ಬರುವಿರಿ, ನೀವು ಏನೆಲ್ಲ ಮಾಡುತ್ತಿದ್ದಿರೆಂಬುದನ್ನು ಆಗ ನಾನು ನಿಮಗೆ ತಿಳಿಸುವೆನು