ನೀವೆಲ್ಲಾ ಜೊತೆಯಾಗಿ ಅಲ್ಲಾಹನ ಪಾಶವನ್ನು ಭದ್ರವಾಗಿ ಹಿಡಿಯಿರಿ ಹಾಗೂ ನೀವು ಭಿನ್ನರಾಗಬೇಡಿ. ನಿಮ್ಮ ಮೇಲಿರುವ ಅಲ್ಲಾಹನ ಅನುಗ್ರಹಗಳನ್ನು ಸ್ಮರಿಸಿರಿ. ನೀವು ಪರಸ್ಪರ ಶತ್ರುಗಳಾಗಿದ್ದಾಗ ಅಲ್ಲಾಹನು ನಿಮ್ಮ ಮನಸ್ಸುಗಳನ್ನು ಪರಸ್ಪರ ಪ್ರೀತಿಯಿಂದ ಬೆಸೆದನು ಮತ್ತು ಅವನ ಅನುಗ್ರಹದಿಂದ ನೀವು ಸಹೋದರರಾದಿರಿ. ಹಾಗೆಯೇ ನೀವು ಒಂದು ಅಗ್ನಿಕುಂಡದ ಅಂಚಿನಲ್ಲಿದ್ದಿರಿ. ಅವನು ನಿಮ್ಮನ್ನು ಅದರಿಂದ ರಕ್ಷಿಸಿದನು. ನೀವು ಸನ್ಮಾರ್ಗವನ್ನು ಪಡೆಯಬೇಕೆಂದು ಈ ರೀತಿ ಅಲ್ಲಾಹನು ನಿಮಗೆ ತನ್ನ ದೃಷ್ಟಾಂತಗಳನ್ನು ವಿವರಿಸುತ್ತಾನೆ