ಅಲ್ಲಾಹನು ವಿಶ್ವಾಸಿಗಳ ನಡುವೆ ಅವರಲ್ಲೇ ಒಬ್ಬರನ್ನು ದೂತರಾಗಿ ನೇಮಿಸುವ ಮೂಲಕ ಅವರಿಗೆ ಉಪಕಾರ ಮಾಡಿರುವನು. ಅವರು (ದೂತರು) ಅವರಿಗೆ ಅವನ (ಅಲ್ಲಾಹನ) ವಚನಗಳನ್ನು ಓದಿ ಕೇಳಿಸುತ್ತಾರೆ, ಅವರನ್ನು ಸಂಸ್ಕರಿಸುತ್ತಾರೆ ಮತ್ತು ಅವರಿಗೆ ಗ್ರಂಥ ಹಾಗೂ ಯುಕ್ತಿಯ ಜ್ಞಾನವನ್ನು ನೀಡುತ್ತಾರೆ. ಇದಕ್ಕೆ ಮುನ್ನ ಅವರು (ವಿಶ್ವಾಸಿಗಳು) ಸ್ಪಷ್ಟವಾಗಿ ದಾರಿಗೆಟ್ಟ ಸ್ಥಿತಿಯಲ್ಲಿದ್ದರು