Back to Languages

Kannada - Chapter 3 - Al-Imran

Translation by Abdussalam Puthige — Permalink

Verse 179 — Surah Al-Imran 3:179

ಅಲ್ಲಾಹನು ಅವನ ಅನುಗ್ರಹದಿಂದ ತಮಗೆ ದಯಪಾಲಿಸಿರುವುದರಲ್ಲಿ (ಸಂಪತ್ತಿನಲ್ಲಿ) ಜಿಪುಣತೆ ತೋರುವವರು, ಅದು ತಮ್ಮ ಪಾಲಿಗೆ ಉತ್ತಮವೆಂದು ಭಾವಿಸದಿರಲಿ. ನಿಜವಾಗಿ ಅದು (ಜಿಪುಣತೆ) ಅವರ ಪಾಲಿಗೆ ಕೆಟ್ಟದಾಗಿದೆ. ಅವರು ಜಿಪುಣತೆ ತೋರಿದ ಆ ಸಂಪತ್ತನ್ನು ಪುನರುತ್ಥಾನ ದಿನ ಹೊರೆಯಾಗಿಸಿ ಅವರ ಕೊರಳಿಗೆ ಕಟ್ಟಲಾಗುವುದು. ಆಕಾಶಗಳ ಮತ್ತು ಭೂಮಿಯ ಅಂತಿಮ ಒಡೆತನವು ಅಲ್ಲಾಹನಿಗೇ ಸೇರಿದೆ ಮತ್ತು ನೀವು ಮಾಡುತ್ತಿರುವ ಎಲ್ಲವನ್ನೂ ಅಲ್ಲಾಹನು ಬಲ್ಲನು