Back to Languages

Kannada - Chapter 3 - Al-Imran

Translation by Abdussalam Puthige — Permalink

Verse 30 — Surah Al-Imran 3:30

(ಅಂತಿಮ ವಿಚಾರಣೆಯ) ಆ ದಿನ, ಪ್ರತಿಯೊಬ್ಬನೂ ತಾನು ಮಾಡಿರುವ ಪ್ರತಿಯೊಂದು ಸತ್ಕರ್ಮವನ್ನು ಹಾಗೂ ತಾನು ಮಾಡಿರುವ ಪ್ರತಿಯೊಂದು ದುಷ್ಕರ್ಮವನ್ನು ತನ್ನ ಮುಂದೆ ಕಾಣುವನು. ಆಗ ಅವನು, ತನ್ನ ಹಾಗೂ ಅವುಗಳ (ಆ ತನ್ನ ಪಾಪಗಳ) ನಡುವೆ ಭಾರೀ ಅಂತರವಿರಬೇಕಿತ್ತು ಎಂದು ಹಂಬಲಿಸುವನು. ಅಲ್ಲಾಹನು ತನ್ನ ಕುರಿತು ನಿಮ್ಮನ್ನು ಎಚ್ಚರಿಸುತ್ತಾನೆ. ಅಲ್ಲಾಹನು ತನ್ನ ದಾಸರ ಪಾಲಿಗೆ ತುಂಬಾ ವಾತ್ಸಲ್ಯಮಯಿಯಾಗಿದ್ದಾನೆ