‘‘ಗ್ರಂಥದವರೇ, ನಮ್ಮ ಮತ್ತು ನಿಮ್ಮ ನಡುವೆ ಸಮಾನವಾಗಿರುವ ಅಂಶದೆಡೆಗೆ ಬನ್ನಿರಿ. ನಾವು ಅಲ್ಲಾಹನ ಹೊರತು ಬೇರಾರನ್ನೂ ಪೂಜಿಸದಿರೋಣ ಮತ್ತು ಯಾರನ್ನೂ ಅವನ ಜೊತೆ ಪಾಲುಗೊಳಿಸದಿರೋಣ. ಹಾಗೆಯೇ ನಮ್ಮಲ್ಲಿ ಯಾರೂ ಅಲ್ಲಾಹನ ಹೊರತು ಬೇರೆ ಯಾರನ್ನೂ ದೇವರುಗಳಾಗಿಸಬಾರದು’’ ಎಂದು ಹೇಳಿರಿ. ಇಷ್ಟಾಗಿಯೂ ಅವರು ಹಠಮಾರಿತನವನ್ನೇ ತೋರಿದರೆ, ‘‘ನೀವು ಸಾಕ್ಷಿಗಳಾಗಿರಿ, ನಾವಂತು ಖಂಡಿತ ಮುಸ್ಲಿಮರಾಗಿರುವೆವು (ಅಲ್ಲಾಹನಿಗೆ ಶರಣಾಗಿರುವೆವು)’’ ಎಂದು ಘೋಷಿಸಿರಿ