ಅವರೇನು ಭೂಮಿಯಲ್ಲಿ ತಿರುಗಾಡಿ, ತಮಗಿಂತ ಹಿಂದಿನವರ ಗತಿ ಏನಾಯಿತೆಂಬುದನ್ನು ಕಾಣುವುದಿಲ್ಲವೇ? ಅವರು (ಹಿಂದಿನವರು) ಇವರಿಗಿಂತ ಹೆಚ್ಚು ಶಕ್ತಿಶಾಲಿಗಳಾಗಿದ್ದರು, ಭೂಮಿಯಲ್ಲಿ ಉಳುಮೆ ನಡೆಸಿದ್ದರು ಮತ್ತು ಅದನ್ನು (ಭೂಮಿಯನ್ನು) ಇವರಿಗಿಂತ ಹೆಚ್ಚು ಸಂಪನ್ನಗೊಳಿಸಿದ್ದರು. ಅವರ ಬಳಿಗೂ ಅವರ ದೂತರು ಸ್ಪಷ್ಟವಾದ ಪುರಾವೆಗಳೊಂದಿಗೆ ಬಂದಿದ್ದರು. ಅಲ್ಲಾಹನು ಅವರ ಮೇಲೆ ಅಕ್ರಮವೆಸಗುವವನಾಗಿರಲಿಲ್ಲ. ಸ್ವತಃ ಅವರೇ ತಮ್ಮ ಮೇಲೆ ಅಕ್ರಮವೆಸಗಿಕೊಂಡಿದ್ದರು