Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 36 — Surah Al-Ahzab 33:36

(ದೂತರೇ,) ಅಲ್ಲಾಹನು ಬಹಳಷ್ಟು ಅನುಗ್ರಹಿಸಿರುವ ಹಾಗೂ ನಿಮ್ಮ ಔದಾರ್ಯಕ್ಕೂ ಪಾತ್ರನಾಗಿರುವ ಒಬ್ಬ ವ್ಯಕ್ತಿಯೊಡನೆ (ಝೈದ್‌ರೊಡನೆ) ನೀವು, ‘‘ನಿನ್ನ ಪತ್ನಿಯನ್ನು ನಿನ್ನ ಬಳಿಯೇ ತಡೆದಿಟ್ಟುಕೋ ಮತ್ತು ಅಲ್ಲಾಹನಿಗೆ ಅಂಜುತ್ತಿರು’’ ಎಂದು ಹೇಳುತ್ತಿದ್ದಾಗ ನೀವು ನಿಮ್ಮ ಮನಸ್ಸಿನಲ್ಲಿದ್ದ ಒಂದು ವಿಷಯವನ್ನು ಅಡಗಿಸಿಟ್ಟಿದ್ದಿರಿ. ಅಲ್ಲಾಹನು ಅದನ್ನು ಬಹಿರಂಗಗೊಳಿಸ ಬಯಸಿದ್ದನು. ನೀವು ಜನರಿಗೆ ಅಂಜಿದಿರಿ. ನಿಜವಾಗಿ ಅಲ್ಲಾಹನು ಅಂಜಿಕೆಗೆ ಹೆಚ್ಚು ಅರ್ಹನು. ಕೊನೆಗೆ ಝೈದ್ ಆಕೆಯ ಜೊತೆ ತನ್ನ ಅಗತ್ಯವನ್ನು ಪೂರೈಸಿ ಕೊಂಡಾಗ (ಆಕೆಯನ್ನು ವಿಚ್ಛೇಧಿಸಿದಾಗ), ನಾವು ನಿಮ್ಮ ಜೊತೆ ಆಕೆಯ ವಿವಾಹ ಮಾಡಿಸಿದೆವು. ತಮ್ಮ ದತ್ತು ಪುತ್ರರು ತಮ್ಮ ಅಗತ್ಯವನ್ನು ಪೂರೈಸಿಕೊಂಡ (ವಿಚ್ಛೇದಿಸಿದ) ಪತ್ನಿಯರ ವಿಷಯದಲ್ಲಿ ವಿಶ್ವಾಸಿಗಳಿಗೆ ಯಾವುದೇ ಅಡೆ ತಡೆ ಇರಬಾರದು ಎಂಬುದೇ ಇದರ ಉದ್ದೇಶವಾಗಿತ್ತು. ಅಲ್ಲಾಹನಂತು ತನ್ನ ಆದೇಶವನ್ನು ಅನುಷ್ಠಾನಿಸಿಯೇ ಬಿಡುತ್ತಾನೆ