ನೀವು ಅವರನ್ನು (ದತ್ತು ಸಂತತಿಯನ್ನು) ಅವರ ತಂದೆಯರ ಹೆಸರಿನಿಂದಲೇ ಕರೆಯಿರಿ. ಅಲ್ಲಾಹನ ದೃಷ್ಟಿಯಲ್ಲಿ ಅದುವೇ ಹೆಚ್ಚು ನ್ಯಾಯೋಚಿತವಾಗಿದೆ. ಅವರ ತಂದೆ ಯಾರೆಂದು ನಿಮಗೆ ತಿಳಿದಿಲ್ಲದಿದ್ದರೂ ಅವರು ಧರ್ಮದಲ್ಲಿ ನಿಮ್ಮ ಸಹೋದರರು ಮತ್ತು ನಿಮ್ಮ ಸಂಗಾತಿಗಳಾಗಿರುವರು. ಅಪ್ಪಿತಪ್ಪಿ ನಿಮ್ಮಿಂದ ಪ್ರಮಾದವೇನಾದರೂ ಸಂಭವಿಸಿದರೆ ನೀವು ಹೊಣೆಗಾರರಲ್ಲ . ಆದರೆ ನೀವು ಮನಃಪೂರ್ವಕ ಮಾಡುವ ತಪ್ಪುಗಳಿಗೆ ಮಾತ್ರ (ನೀವೇ ಹೊಣೆಗಾರರು). ಅಲ್ಲಾಹನು ಸದಾ ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ