Back to Languages

Kannada - Chapter 34 - Saba

Translation by Abdussalam Puthige — Permalink

Verse 13 — Surah Saba 34:13

ಕೊನೆಗೆ ನಾವು ಅವರಿಗೆ (ಸುಲೈಮಾನರಿಗೆ) ಮರಣವನ್ನು ವಿಧಿಸಿದೆವು. ಗೆದ್ದಲುಗಳು ಅವರ ದಂಡವನ್ನು ತಿಂದು ಬಿಡುವವರೆಗೂ ಅವುಗಳಿಗೆ (ಜಿನ್ನ್‌ಗಳಿಗೆ), ಅವರ ಮರಣದ ಕುರಿತು ತಿಳಿದೇ ಇರಲಿಲ್ಲ. ಅದು ಬಿದ್ದು ಬಿಟ್ಟಾಗ, ಅವುಗಳಿಗೆ ವಿಷಯ ತಿಳಿಯಿತು. ಒಂದು ವೇಳೆ ಅವುಗಳಿಗೆ ಅಜ್ಞಾತ ವಿಷಯಗಳ ಜ್ಞಾನ ಇದ್ದಿದ್ದರೆ, ಅವು ಆ ರೀತಿ ಅಪಮಾನಕಾರಿ ಶಿಕ್ಷೆಗೆ ತುತ್ತಾಗುತ್ತಿರಲಿಲ್ಲ