Back to Languages

Kannada - Chapter 34 - Saba

Translation by Abdussalam Puthige — Permalink

Verse 18 — Surah Saba 34:18

ಆದರೆ ಅವರು, ‘‘ನಮ್ಮೊಡೆಯಾ, ನಮ್ಮ ಪ್ರಯಾಣದ ಗುರಿಗಳ ನಡುವಣ ಅಂತರವನ್ನು ಹೆಚ್ಚಿಸು’’ ಎಂದು ಪ್ರಾರ್ಥಿಸಿದರು. ಹೀಗೆ ಅವರು ತಮ್ಮ ಮೇಲೆ ತಾವೇ ಅಕ್ರಮವೆಸಗಿದರು. ಕೊನೆಗೆ ನಾವು ಅವರನ್ನು ಕಥೆಗಳಾಗಿಸಿ ಬಿಟ್ಟೆವು ಮತ್ತು ನಾವು ಅವರನ್ನು ಸಂಪೂರ್ಣ ವಿಚ್ಛಿದ್ರಗೊಳಿಸಿ ಬಿಟ್ಟೆವು. ಪ್ರತಿಯೊಬ್ಬ ಸಹನಶೀಲ, ಕೃತಜ್ಞನಿಗೆ ಇದರಲ್ಲಿ ಖಂಡಿತ ಪಾಠವಿದೆ