Back to Languages

Kannada - Chapter 4 - An-Nisa

Translation by Abdussalam Puthige — Permalink

Verse 134 — Surah An-Nisa 4:134

ವಿಶ್ವಾಸಿಗಳೇ, ನೀವು ಕಟ್ಟುನಿಟ್ಟಾಗಿ ಸದಾ ನ್ಯಾಯವನ್ನು ಪಾಲಿಸುವವರಾಗಿರಿ ಹಾಗೂ ಅಲ್ಲಾಹನಿಗಾಗಿ (ಸತ್ಯದ ಪರ) ಸಾಕ್ಷಿ ಹೇಳುವವರಾಗಿರಿ – ಅದು ಸ್ವತಃ ನಿಮ್ಮ ವಿರುದ್ಧ ಅಥವಾ ನಿಮ್ಮ ತಂದೆ-ತಾಯಿಯ ಅಥವಾ ನಿಕಟ ಬಂಧುಗಳ ವಿರುದ್ಧವಾಗಿದ್ದರೂ ಸರಿಯೇ. ಶ್ರೀಮಂತನಿರಲಿ, ಬಡವನಿರಲಿ, ಅವರಿಬ್ಬರ ಪಾಲಿಗೂ ಇತರೆಲ್ಲರಿಗಿಂತ ಹೆಚ್ಚಾಗಿ ಅಲ್ಲಾಹನೇ ಹಿತೈಷಿಯಾಗಿದ್ದಾನೆ. ನೀವೆಂದೂ ನಿಮ್ಮ ಚಿತ್ತಾಕಾಂಕ್ಷೆಗಳನ್ನು ಅನುಸರಿಸಿ ನ್ಯಾಯಪಾಲನೆಯಲ್ಲಿ ತಪ್ಪಬೇಡಿ. (ನ್ಯಾಯ ಪ್ರಕ್ರಿಯೆಯಲ್ಲಿ) ನೀವು ನಾಲಿಗೆ ತಿರುಚಿದರೆ (ಸಾಕ್ಷವನ್ನು ಬದಲಿಸಿದರೆ) ಅಥವಾ ಜಾರಿಕೊಂಡರೆ, ಅಲ್ಲಾಹನು ನಿಮ್ಮೆಲ್ಲ ಕೃತ್ಯಗಳ ಕುರಿತು ಅರಿವು ಉಳ್ಳವನಾಗಿದ್ದಾನೆ (ಎಂಬುನ್ನು ಮರೆಯಬೇಡಿ)