ಅಲ್ಲಾಹನು ನಿಮ್ಮಲ್ಲಿನ ಕೆಲವರಿಗೆ ಮತ್ತೆ ಕೆಲವರಿಗಿಂತ ಹೆಚ್ಚಾಗಿ ದಯಪಾಲಿಸಿರುವ ಅನುಗ್ರಹಕ್ಕಾಗಿ ಆಶೆ ಪಡಬೇಡಿ. ಪುರುಷರು ಸಂಪಾದಿಸಿದ್ದು ಅವರಿಗೆ (ಪುರುಷರಿಗೆ) ಮತ್ತು ಸ್ತ್ರೀಯರು ಸಂಪಾದಿಸಿದ್ದು ಅವರಿಗೆ (ಸ್ತ್ರೀ ಯರಿಗೆ) ಸಲ್ಲುವುದು. ಅಲ್ಲಾಹನಲ್ಲಿ ಅವನ ಅನುಗ್ರಹವನ್ನು ಬೇಡಿರಿ. ಅಲ್ಲಾಹನು ಖಂಡಿತವಾಗಿಯೂ ಎಲ್ಲವನ್ನೂ ಚೆನ್ನಾಗಿ ಬಲ್ಲನು