ಗ್ರಂಥ ನೀಡಲ್ಪಟ್ಟವರೇ, (ಇದೀಗ) ನಾವು ಇಳಿಸಿಕೊಟ್ಟಿರುವುದರಲ್ಲಿ (ಕುರ್‌ಆನ್‌ನಲ್ಲಿ) ನಂಬಿಕೆ ಇಡಿರಿ – ಅದು, ಹಿಂದಿನಿಂದಲೇ ನಿಮ್ಮ ಬಳಿ ಇರುವುದನ್ನು (ತೌರಾತ್ ಹಾಗೂ ಇಂಜೀಲ್ ಗ್ರಂಥಗಳನ್ನು) ಸಮರ್ಥಿಸುತ್ತದೆ. ನಾವು ಅವರ (ಧಿಕ್ಕಾರಿಗಳ) ಮುಖಗಳನ್ನು ವಿಕೃತಗೊಳಿಸಿ ಅವುಗಳನ್ನು ಹಿಂದಕ್ಕೆ ತಿರುಚಿ ಬಿಡುವ ಅಥವಾ (ಈ ಹಿಂದೆ) ‘ಶನಿವಾರದವರನ್ನು’ ಶಪಿಸಿದಂತೆ ಅವರನ್ನು ಶಪಿಸಿ ಬಿಡುವ ಮುನ್ನ (ಅವರು ನಂಬಿಕೆ ಇಡಲಿ). ಅಲ್ಲಾಹನ ಆದೇಶವಂತೂ ಖಂಡಿತ ಅನುಷ್ಠಾನವಾಗುತ್ತದೆ