ವಿಶ್ವಾಸಿಗಳೇ, ಅಲ್ಲಾಹನ ಆದೇಶ ಪಾಲಿಸಿರಿ ಮತ್ತು ಅಲ್ಲಾಹನ ದೂತರ ಹಾಗೂ ನಿಮ್ಮ ಪೈಕಿ ಅಧಿಕಾರ ಸ್ಥಾನದಲ್ಲಿರುವವರ ಆದೇಶ ಪಾಲಿಸಿರಿ. ನೀವು ಅಲ್ಲಾಹನಲ್ಲಿ ಹಾಗೂ ಪರಲೋಕದಲ್ಲಿ ನಂಬಿಕೆ ಉಳ್ಳವರಾಗಿದ್ದರೆ, ಯಾವುದಾದರೂ ವಿಷಯದಲ್ಲಿ ನಿಮ್ಮ ನಡುವೆ ವಿವಾದ ಉಂಟಾದಾಗ, ಅದನ್ನು ಅಲ್ಲಾಹ್ ಮತ್ತವನ ದೂತರೆಡೆಗೆ ಮರಳಿಸಿರಿ. ಇದುವೇ ಅತ್ಯುತ್ತಮ ಧೋರಣೆಯಾಗಿದೆ ಹಾಗೂ ಇದರ ಪರಿಣಾಮವು ಉತ್ತಮವಾಗಿರುತ್ತದೆ