Back to Languages

Kannada - Chapter 4 - An-Nisa

Translation by Abdussalam Puthige — Permalink

Verse 94 — Surah An-Nisa 4:94

ವಿಶ್ವಾಸಿಗಳ ಪೈಕಿ, ಸೂಕ್ತ ಕಾರಣವಿಲ್ಲದೆ (ಹೋರಾಟದಲ್ಲಿ ಭಾಗವಹಿಸದೆ) ಕುಳಿತಿರುವವರು ಮತ್ತು ತಮ್ಮ ಸಂಪತ್ತುಗಳನ್ನು ಹಾಗೂ ತಮ್ಮ ಜೀವಗಳನ್ನು ತೊಡಗಿಸಿ ಅಲ್ಲಾಹನ ಮಾರ್ಗದಲ್ಲಿ ಜಿಹಾದ್ (ಹೋರಾಟ) ನಡೆಸುವವರು ಸಮಾನರಲ್ಲ. ತಮ್ಮ ಸಂಪತ್ತುಗಳನ್ನು ಹಾಗೂ ತಮ್ಮ ಜೀವಗಳನ್ನು ತೊಡಗಿಸಿ ಜಿಹಾದ್ ಮಾಡುವವರಿಗೆ ಅಲ್ಲಾಹನು, ಕುಳಿತಿರುವವರಿಗಿಂತ ಹೆಚ್ಚಿನ ಹಿರಿಮೆಯನ್ನು ಅನುಗ್ರಹಿಸಿದ್ದಾನೆ. ಪ್ರತಿಯೊಬ್ಬರಿಗೂ ಅವನು ಸತ್ಫಲದ ವಾಗ್ದಾನವನ್ನೇ ಮಾಡಿರುತ್ತಾನೆ. ಮತ್ತು ಕುಳಿತವರಿಗೆ ಹೋಲಿಸಿದರೆ, ಅಲ್ಲಾಹನು ಹೋರಾಟಗಾರರಿಗೆ ಭಾರೀ ಪ್ರತಿಫಲವನ್ನು ಅನುಗ್ರಹಿಸಿದ್ದಾನೆ