ಈ ಹಿಂದೆ ನಿಮ್ಮ ಬಳಿಗೆ ಯೂಸುಫರು ಸ್ಪಷ್ಟ ಪುರಾವೆಗಳೊಂದಿಗೆ ಬಂದಿದ್ದರು. ಆದರೆ, ಅವರು ನಿಮ್ಮ ಬಳಿಗೆ ತಂದಿದ್ದ ಸಂದೇಶದ ಕುರಿತು ನೀವು ಸಂಶಯಗ್ರಸ್ತರಾಗಿದ್ದಿರಿ. ಕೊನೆಗೆ ಅವರು ಮೃತರಾದಾಗ ನೀವು, ಅವರ ಬಳಿಕ ಅಲ್ಲಾಹನು ಇನ್ನಾರನ್ನೂ ದೂತರಾಗಿ ಕಳಿಸಲಾರನೆಂದು ಹೇಳಿದಿರಿ. ಅತಿಕ್ರಮಿಯಾಗಿರುವ ಸಂಶಯಗ್ರಸ್ತನನ್ನು ಅಲ್ಲಾಹನು ಇದೇ ರೀತಿ ದಾರಿಗೆಡಿಸುತ್ತಾನೆ