ಧರ್ಮನಿಷ್ಠರಿಗೆ ವಾಗ್ದಾನ ಮಾಡಲಾಗಿರುವ ಸ್ವರ್ಗವು (ಹೀಗಿರುತ್ತದೆ); ಅದರಲ್ಲಿ ಎಂದೂ ಮಲಿನವಾಗದ ನೀರಿರುವ ನದಿಗಳಿರುವವು ಹಾಗೂ ರುಚಿ ಬದಲಾಗದ ಹಾಲಿನ ನದಿಗಳು, ಕುಡಿಯುವವರಿಗೆ ತುಂಬಾ ಸ್ವಾದಿಷ್ಟವಾಗಿರುವ ಮದಿರೆಯ ನದಿಗಳು ಮತ್ತು ಶುದ್ಧ ಜೇನಿನ ನದಿಗಳಿರುವವು. ಅಲ್ಲಿ ಅವರಿಗಾಗಿ ಎಲ್ಲ ಬಗೆಯ ಫಲಗಳಿರುವವು ಮತ್ತು ಅವರ ಒಡೆಯನ ಕಡೆಯಿಂದ ಕ್ಷಮಾದಾನ ಸಿಗುವುದು. ಇಂಥವರು (ಸ್ವರ್ಗವಾಸಿಗಳು), ಸದಾಕಾಲ ನರಕದಲ್ಲೇ ಇರುವ ಹಾಗೂ ಕರುಳುಗಳನ್ನು ಚೂರು ಚೂರಾಗಿಸುವಂತಹ ಕುದಿಯುವ ನೀರನ್ನು ಕುಡಿಸಲಾಗುವ ವ್ಯಕ್ತಿಗೆ ಸಮನಾಗಬಲ್ಲರೇ