Back to Languages

Kannada - Chapter 48 - Al-Fath

Translation by Abdussalam Puthige — Permalink

Verse 6 — Surah Al-Fath 48:6

ಮತ್ತು ಅಲ್ಲಾಹನು ತನ್ನ ಕುರಿತು ಅಪನಂಬಿಕೆ ಇಟ್ಟುಕೊಂಡಿದ್ದ ಕಪಟ ಪುರುಷರು ಹಾಗೂ ಕಪಟ ಸ್ತ್ರೀಯರನ್ನು ಮತ್ತು ಬಹುದೇವಾರಾಧಕ ಪುರುಷರನ್ನು ಹಾಗೂ ಬಹುದೇವಾರಾಧಕ ಸ್ತ್ರೀಯರನ್ನು ಶಿಕ್ಷಿಸಲಿದ್ದಾನೆ. ದೌರ್ಭಾಗ್ಯವು ಅವರನ್ನು ಸುತ್ತುವರಿದುಕೊಂಡಿದೆ. ಅವರ ವಿರುಧ್ಧ ಅಲ್ಲಾಹನು ಕೋಪಗೊಂಡಿರುವನು ಹಾಗೂ ಅವರನ್ನು ಶಪಿಸಿರುವನು ಮತ್ತು ಅವರಿಗಾಗಿ ನರಕವನ್ನು ಸಿದ್ಧಗೊಳಿಸಿರುವನು. ಅದು ಬಹಳ ಕೆಟ್ಟ ನೆಲೆಯಾಗಿದೆ