Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 16 — Surah Al-Maidah 5:16

ಖಂಡಿತವಾಗಿಯೂ ಮರ್ಯಮರ ಪುತ್ರ ಮಸೀಹರೇ ಅಲ್ಲಾಹನೆಂದು ವಾದಿಸಿದವರು ಧಿಕ್ಕಾರಿಗಳಾಗಿ ಬಿಟ್ಟರು. ಹೇಳಿರಿ; ಒಂದು ವೇಳೆ ಅಲ್ಲಾಹನು ಮರ್ಯಮರ ಪುತ್ರ ಈಸಾರನ್ನೂ, ಅವರ ತಾಯಿಯನ್ನೂ, ಭೂಮಿಯಲ್ಲಿರುವ ಎಲ್ಲರನ್ನೂ ನಾಶ ಮಾಡ ಬಯಸಿದರೆ, ಅವನನ್ನು ಯಾರು ತಾನೇ ತಡೆಯಬಲ್ಲರು? ಆಕಾಶಗಳ, ಭೂಮಿಯ ಮತ್ತು ಅವುಗಳ ನಡುವೆ ಇರುವ ಎಲ್ಲವುಗಳ ಅಧಿಕಾರವು ಅಲ್ಲಾಹನಿಗೇ ಸೇರಿದೆ. ಅವನು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ. ಅಲ್ಲಾಹನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದಾನೆ