ಇಂದು ನಿಮ್ಮ ಪಾಲಿಗೆ ಎಲ್ಲ ಶುದ್ಧ ವಸ್ತುಗಳನ್ನು ಸಮ್ಮತಗೊಳಿಸಲಾಗಿದೆ. ಇನ್ನು, ಗ್ರಂಥದವರ ಆಹಾರವು ನಿಮ್ಮ ಪಾಲಿಗೆ ಸಮ್ಮತವಾಗಿದೆ ಮತ್ತು ನಿಮ್ಮ ಆಹಾರವು ಅವರ ಪಾಲಿಗೆ ಸಮ್ಮತವಾಗಿದೆ. ಹಾಗೆಯೇ, ವಿಶ್ವಾಸಿಗಳಲ್ಲಿನ ಸುಶೀಲ ಸ್ತ್ರೀಯರು ಮತ್ತು ನಿಮಗಿಂತ ಮುಂಚೆ ಧರ್ಮಗ್ರಂಥ ನೀಡಲಾಗಿದ್ದವರಲ್ಲಿನ ಸುಶೀಲ ಸ್ತ್ರೀಯರು ನಿಮ್ಮ ಪಾಲಿಗೆ ಸಮ್ಮತರಾಗಿದ್ದಾರೆ – ನೀವು ಅವರಿಗೆ ಅವರ ಶುಲ್ಕ (ವಿವಾಹಧನ)ವನ್ನು ಪಾವತಿಸಿದ ಬಳಿಕ. ನೀವು (ಅವರ ಜೊತೆ, ವಿವಾಹದ) ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವವರಾಗಿರಬೇಕು, ಅನೈತಿಕ ವ್ಯವಹಾರಗಳಲ್ಲಿ ತೊಡಗಿರಬಾರದು ಮತ್ತು ನೀವು ಗುಪ್ತ ನಂಟುಗಳನ್ನು ಪೋಷಿಸಬಾರದು. ವಿಶ್ವಾಸವನ್ನು ಧಿಕ್ಕರಿಸಿದವನ ಕರ್ಮಗಳೆಲ್ಲಾ ವ್ಯರ್ಥವಾದವು. ಪರಲೋಕದಲ್ಲಿ ಅವನು, ಎಲ್ಲವನ್ನೂ ಕಳೆದುಕೊಂಡವರ ಸಾಲಲ್ಲಿರುವನು