Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 47 — Surah Al-Maidah 5:47

(ದೂತರೇ,) ನಾವೀಗ ನಿಮಗೆ ಸತ್ಯವಿರುವ ಗ್ರಂಥವನ್ನು ಇಳಿಸಿ ಕೊಟ್ಟಿರುವೆವು. ಇದು (ಗತಕಾಲದ) ಗ್ರಂಥದ ಪೈಕಿ ಜನರ ಬಳಿ ಉಳಿದಿರುವುದನ್ನು ಸಮರ್ಥಿಸುವ ಮತ್ತು ಅದನ್ನು ಕಾಪಾಡುವ ಗ್ರಂಥವಾಗಿದೆ. ನೀವಿನ್ನು ಅಲ್ಲಾಹನು ಇಳಿಸಿರುವ ನಿಯಮ ಪ್ರಕಾರವೇ ಅವರ ನಡುವೆ ತೀರ್ಪು ನೀಡಿರಿ. ನಿಮ್ಮ ಬಳಿಗೆ ಸತ್ಯವು ಬಂದಿರುವಾಗ, ನೀವು ಅವರ ಅಪೇಕ್ಷೆಗಳನ್ನು ಅನುಸರಿಸಬೇಡಿ. ನಾವು ನಿಮ್ಮ ಪೈಕಿ ಪ್ರತಿಯೊಬ್ಬರಿಗೂ (ಪ್ರತಿಯೊಂದು ಸಮುದಾಯಕ್ಕೂ) ನಿರ್ದಿಷ್ಟ ನಿಯಮ ಹಾಗೂ ದಾರಿಯೊಂದನ್ನು ನಿಗದಿ ಪಡಿಸಿದ್ದೇವೆ. ಅಲ್ಲಾಹನು ಬಯಸಿದ್ದರೆ ನಿಮ್ಮೆಲ್ಲರನ್ನು ಒಂದೇ ಸಮುದಾಯ ವಾಗಿಸುತ್ತಿದ್ದನು. ಆದರೆ ಅವನು, ನಿಮಗೆ ಏನನ್ನು ನೀಡಿರುವನೋ ಅದರ ಮೂಲಕವೇ ನಿಮ್ಮನ್ನು ಪರೀಕ್ಷಿಸಬಯಸುತ್ತಾನೆ. ನೀವೀಗ ಒಳಿತಿನಲ್ಲಿ ಪರಸ್ಪರ ಸ್ಪರ್ಧಿಸಿರಿ. ಕೊನೆಗೆ ನೀವೆಲ್ಲರೂ ಅಲ್ಲಾಹನೆಡೆಗೇ ಮರಳಲಿಕ್ಕಿದೆ – ಆಗ ಅವನು, ನೀವು ಭಿನ್ನತೆ ತಾಳಿದ್ದ ವಿಷಯಗಳ ಕುರಿತು ನಿಮಗೆ ತಿಳಿಸುವನು