ವಿಶ್ವಾಸಿಗಳೇ, ನೀವು ಸದಾ ಅಲ್ಲಾಹನಿಗಾಗಿ ನ್ಯಾಯದ ಪರ ಸಾಕ್ಷಿ ನಿಲ್ಲುವವರಾಗಿರಿ. ಒಂದು ಜನಾಂಗದ ಮೇಲಿನ ಹಗೆತನ ಕೂಡಾ, ನ್ಯಾಯ ಪಾಲಿಸದೆ ಇರಲು ನಿಮ್ಮನ್ನು ಪ್ರಚೋದಿಸ ಬಾರದು. ನೀವು ಸದಾ ನ್ಯಾಯವನ್ನೇ ಪಾಲಿಸಿರಿ. ಅದುವೇ ಧರ್ಮನಿಷ್ಠೆಗೆ ಹೆಚ್ಚು ನಿಕಟ ಧೋರಣೆಯಾಗಿದೆ. ಸದಾ ಅಲ್ಲಾಹನಿಗೆ ಅಂಜಿರಿ. ಅಲ್ಲಾಹನಂತು, ನೀವು ಮಾಡುತ್ತಿರುವ ಎಲ್ಲವನ್ನೂ ಚೆನ್ನಾಗಿ ಅರಿತಿರುತ್ತಾನೆ