Back to Languages

Kannada - Chapter 59 - Al-Hashr

Translation by Abdussalam Puthige — Permalink

Verse 10 — Surah Al-Hashr 59:10

ಹಾಗೆಯೇ (ಈ ಸಂಪತ್ತು) ಅವರಿಗಿಂತ (ವಲಸಿಗರಿಗಿಂತ) ಮುನ್ನ, ವಲಸೆಯ ಸ್ಥಾನ (ಮದೀನ)ದಲ್ಲಿ ನೆಲೆಸಿದ್ದ ಹಾಗೂ ವಿಶ್ವಾಸಿಗಳಾಗಿದ್ದವರಿಗೆ (ಅನ್ಸಾರ್‌ಗಳಿಗೆ) ಸೇರಿದೆ. ಅವರು ತಮ್ಮ ಬಳಿಗೆ ವಲಸೆ ಬಂದವರನ್ನು ಪ್ರೀತಿಸುತ್ತಾರೆ, ಅವರಿಗೆ ಏನನ್ನು ನೀಡಲಾಯಿತೋ ಆ ಕುರಿತು ಅವರು ತಮ್ಮ ಮನದಲ್ಲಿ ಆಸೆ ಪಡುವುದಿಲ್ಲ ಮತ್ತು ಸ್ವತಃ ತಾವು ಕಷ್ಟದಲ್ಲಿದ್ದರೂ ಅವರಿಗೆ (ವಲಸಿಗರಿಗೆ) ಪ್ರಾಶಸ್ತ್ಯ ನೀಡುತ್ತಾರೆ. ಮನಸ್ಸಿನ ಸಣ್ಣ ತನದಿಂದ ರಕ್ಷಿಸಲ್ಪಟ್ಟವರೇ ವಿಜಯಿಗಳು