Back to Languages

Kannada - Chapter 6 - Al-Anam

Translation by Abdussalam Puthige — Permalink

Verse 127 — Surah Al-Anam 6:127

ಅವನು ಅವರೆಲ್ಲರನ್ನೂ ಒಂದೆಡೆ ಸೇರಿಸುವ ದಿನ ‘‘ಜಿನ್ನ್‌ಗಳೇ, ನೀವು ಮಾನವರಲ್ಲಿ ಅನೇಕರನ್ನು ವಶೀಕರಿಸಿಕೊಂಡಿರಿ’’ ಎನ್ನಲಾಗುವುದು. ಆಗ ಮಾನವರ ಪೈಕಿ ಅವರ (ಜಿನ್ನ್‌ಗಳ) ಆಪ್ತರು ಹೇಳುವರು; ‘‘ನಮ್ಮೊಡೆಯಾ, ನಮ್ಮಲ್ಲಿನ ಕೆಲವರು ಮತ್ತೆ ಕೆಲವರಿಂದ ಪರಸ್ಪರ ಲಾಭ ಪಡೆದರು. ಕೊನೆಗೆ ನಾವು, ನೀನು ನಮಗಾಗಿ ನಿಗದಿಪಡಿಸಿದ ಅಂತಿಮ ಗಡುವನ್ನು ತಲುಪಿದೆವು.’’ ಅವನು ಹೇಳುವನು; ನರಕಾಗ್ನಿಯೇ ನಿಮ್ಮ ನೆಲೆಯಾಗಿದೆ. ಅಲ್ಲಾಹನು ಯಾರನ್ನು ರಕ್ಷಿಸಲಿಚ್ಛಿಸುವನೋ ಅವರ ಹೊರತು ನೀವೆಲ್ಲರೂ ಇದರಲ್ಲೇ ಶಾಶ್ವತವಾಗಿ ಇರುವಿರಿ. ಖಂಡಿತವಾಗಿಯೂ ನಿಮ್ಮೊಡೆಯನು ಯುಕ್ತಿವಂತನೂ ಜ್ಞಾನಿಯೂ ಆಗಿರುವನು