‘‘ಈ ಪ್ರಾಣಿಗಳ ಗರ್ಭದಲ್ಲೇನಿದೆಯೋ ಅದು ಕೇವಲ ನಮ್ಮ ಪುರುಷರಿಗೆ ಮಾತ್ರ ಮೀಸಲಾಗಿದೆ. ನಮ್ಮ ಪತ್ನಿಯರ ಪಾಲಿಗೆ ಅವು ನಿಷಿದ್ಧವಾಗಿವೆ. ಇನ್ನು ಅವು ಮೃತ ಸ್ಥಿತಿಯಲ್ಲಿ ಜನಿಸಿದರೆ ಮಾತ್ರ ಅವರೂ ಅದರಲ್ಲಿ ಪಾಲುದಾರರಾಗುವರು’’ ಎಂದು ಅವರು ಹೇಳುತ್ತಾರೆ. (ಈ ರೀತಿ) ಸುಳ್ಳುಗಳನ್ನು ಸೃಷ್ಟಿಸಿದ್ದರ ಪ್ರತಿಫಲವನ್ನು ಅವನು (ಅಲ್ಲಾಹನು) ಅವರಿಗೆ ನೀಡುವನು. ಅವನಂತು ಅಪಾರ ಯುಕ್ತಿವಂತನೂ ಜ್ಞಾನಿಯೂ ಆಗಿರುವನು