ಯಹೂದಿಗಳಾದವರ ಪಾಲಿಗೆ ನಾವು ಉಗುರುಳ್ಳ ಎಲ್ಲ ಜೀವಿಗಳನ್ನು ನಿಷೇಧಿಸಿದ್ದೆವು ಮತ್ತು ದನ ಹಾಗೂ ಆಡುಗಳ, ಬೆನ್ನಲ್ಲಿರುವ, ಕರುಳಲ್ಲಿರುವ ಹಾಗೂ ಮೂಳೆಗಳಿಗೆ ತಗಲಿರುವ ಕೊಬ್ಬಿನ ಹೊರತು ಇತರ ಕೊಬ್ಬನ್ನು ನಾವು ಅವರ ಪಾಲಿಗೆ ನಿಷೇಧಿಸಿದ್ದೆವು. ಇದು ನಾವು ಅವರ ಕಿಡಿಗೇಡಿತನಕ್ಕೆ ನೀಡಿದ ಪ್ರತಿಫಲ. ಖಂಡಿತ ನಾವೇ ಸತ್ಯವಂತರು