(ದೂತರೇ,) ‘‘ಇವುಗಳನ್ನು ಅಲ್ಲಾಹನು ನಿಷೇಧಿಸಿರುವನೆಂದು ಸಾಕ್ಷ್ಯ ಹೇಳಬಲ್ಲ ನಿಮ್ಮ ಸಾಕ್ಷಿಗಳನ್ನು ಕರೆ ತನ್ನಿರಿ’’ ಎಂದು ಹೇಳಿರಿ. ಒಂದು ವೇಳೆ ಅವರು ಹಾಗೆಂದು ಸಾಕ್ಷ್ಯ ಹೇಳಿದರೂ ನೀವು ಅವರ ಜೊತೆ ಸಾಕ್ಷ್ಯ ಹೇಳಬೇಡಿ. ಹಾಗೆಯೇ ನೀವು, ನಮ್ಮ ವಚನಗಳನ್ನು ಸುಳ್ಳೆಂದು ತಿರಸ್ಕರಿಸಿದವರ, ಪರಲೋಕದಲ್ಲಿ ವಿಶ್ವಾಸವಿಲ್ಲದವರ ಮತ್ತು (ಮಿಥ್ಯ ದೇವರುಗಳನ್ನು) ತಮ್ಮ ಒಡೆಯನಿಗೆ ಸಮಾನರಾಗಿ ಪರಿಗಣಿಸುವವರ ಅಪೇಕ್ಷೆಗಳನ್ನು ಅನುಸರಿಸಬೇಡಿ